16
April, 2026

A News 365Times Venture

16
Thursday
April, 2026

A News 365Times Venture

ಬಿಜೆಪಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನೂ ವಿರೋಧಿಸಿ ಪ್ರತಿಭಟಿಸಲಿ-ಸಚಿವ ದಿನೇಶ್ ಗುಂಡೂರಾವ್

Date:

ಮೈಸೂರು,ಏಪ್ರಿಲ್,2,2025 (www.justkannada.in): ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯವರು ಪ್ರತಿಭಟನೆ ಮಾಡಲಿ.ಅದರ ಜೊತೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನೂ ಸೇರಿಸಿ ಪ್ರತಿಭಟನೆ ಮಾಡಲಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ಶಾಸಕರನ್ನ ಸ್ಪೀಕರ್ ಅಮಾನತು ಮಾಡಿದ ಸಂಬಂಧ  ಸದನಕ್ಕೆ ಅಗೌರವ ತೋರಿದ ಶಾಸಕರನ್ನು ಸ್ಪೀಕರ್ ಉಚ್ಛಾಟನೆ ಮಾಡಿದ್ದಾರೆ. ಮುಂದೆ ಯಾರು ಈ ರೀತಿ ಮಾಡಬಾರದು ಅಂತ ಈ ರೀತಿ ಮಾಡಿದ್ದಾರೆ. ಸ್ಪೀಕರ್ ಕ್ರಮ ಸರಿಯಿದೆ. ಈ ಹಿಂದೆ ಪ್ರಧಾನಿ ಮೋದಿ ಸರ್ಕಾರದಲ್ಲಿ ಇಡೀ ಸದನವನ್ನೇ ಹೊರ ಹಾಕಿದ್ದರು. ಎಷ್ಟೋ ಜನರನ್ನ ಅಮಾನತು ಮಾಡಿದರು. ಇದೆಲ್ಲವನ್ನೂ ಬಿಜೆಪಿ ಮರೆತಂತಿದೆ ಎಂದು ಟಾಂಗ್ ಕೊಟ್ಟರು.

ಕೆ.ಆರ್ ಆಸ್ಪತ್ರೆ ಹಾಗೂ ನೂತನ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಕೊರತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕೊರತೆ ಏನಿಲ್ಲ. ಕಳೆದ ಬಾರಿ ಬಂದಿದ್ದ ಸಂದರ್ಭದಲ್ಲಿ ಸೂಚನೆ ಕೊಟ್ಟಿದ್ದೇನೆ. ಜನ ಆರೋಗ್ಯ ಸಮಸ್ಯೆಯಿಂದ ಇಲ್ಲಿಗೆ ಹೆಚ್ಚು ಬರುತ್ತಾರೆ. ವೈದ್ಯರು ಒಳ್ಳೆಯ ಚಿಕಿತ್ಸೆ ಕೊಡುತ್ತಿದ್ದಾರೆ. ಇನ್ನು ಹೆಚ್ಚಿನ ರೀತಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುತ್ತೇವೆ ಎಂದರು.

ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರ ಕುರಿತು ಮಾತನಾಡಿದ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದೆ. ಸಂವಿಧಾನ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಾಯ್ದೆ ಮಂಡನೆಗೆ ಮುಂದಾಗಿದೆ. ಇದು ಸರಿಯಿಲ್ಲ. ಬಿಜೆಪಿ ಏನೇ ಮಾಡಿದರೂ ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ತೀರ್ಮಾನ ಆಗುತ್ತದೆ ಎಂದರು.

ಬಹುತೇಕ ವಕ್ಫ್ ಆಸ್ತಿ ಕಾಂಗ್ರೆಸ್ ನಾಯಕರದ್ದು ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಬೊಮ್ಮಾಯಿ ಸಿಎಂ ಆಗಿದ್ದಾಗ ಏನು ಮಾಡುತ್ತಿದ್ದರು. ಈಗ ರಾಜಕೀಯಕ್ಕೆ ಏನು ಬೇಕಾದರೂ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

Key words: BJP, protest, price hike, Minister Dinesh Gundurao

The post ಬಿಜೆಪಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನೂ ವಿರೋಧಿಸಿ ಪ್ರತಿಭಟಿಸಲಿ-ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...