11
June, 2026

A News 365Times Venture

11
Thursday
June, 2026

A News 365Times Venture

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

Date:

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಸಾಮ್ರಾಟ್ ಚೌಧರಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಬಿಜೆಪಿಯ ಸಾಮ್ರಾಟ್ ಚೌಧರಿ  ಅವರನ್ನು ಬಿಹಾರ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಇಂದು  ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ  ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಲ್ಲದೆ ಜೆಡಿಯುನ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಾಮ್ರಾಟ್ ಚೌಧರಿ ಬಿಹಾರ ರಾಜ್ಯದ ಮೊದಲ ಬಿಜೆಪಿಯಿಂದ ಮೊದಲ ಸಿಎಂ  ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಾರಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.  2017ರಲ್ಲಿ ಜನತಾ ಪಕ್ಷ ಸೇರ್ಪಡೆಯಾದ ಸಾಮ್ರಾಟ್ ಚೌದರಿ,  2023ರಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷರಾಗಿ 2024ರಲ್ಲಿ ಎನ್ ಡಿಎ ಮೈತ್ರಿಕೂಟದ ಡಿಸಿಎಂ ಆಗಿದ್ದರು .

Key words: Samrat Chaudhary, takes ,oath, new CM, Bihar

The post ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಟ್ ಅಂಡ್ ರನ್ ಬೇಡ: ದಾಖಲೆ ಇದ್ರೆ ಬಿಚ್ಚಿಡಿ-ಆರ್. ಅಶೋಕ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,11,2026 (www.justkannada.in):  ಬೆಂಗಳೂರಿನಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ....

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...