ಬೆಂಗಳೂರು, ಮೇ, 22,2025 (www.justkannada.in): ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ಬೆಂಗಳೂರು ಅರಮನೆಗೆ 3400 ಕೋಟಿ ಟಿಡಿಆರ್ ಅನ್ನು ರಾಜಮನೆತನಕ್ಕೆ ನೀಡಲು ಅದೇಶಿಸಿದೆ.
ಸುಪ್ರೀಂಕೋರ್ಟ್ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠವು ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡುವಂತೆ ರಾಜ್ಯ ಸರ್ಕಾರಕ್ಕೆ ಈ ಹಿಂದೆ ಸೂಚಿಸಲಾಗಿತ್ತು. ಅದರಂತೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್ ಅನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ನಲ್ಲಿ ಇಡಲಾಗಿತ್ತು. ಇದನ್ನು ರಾಜಮನೆತನದ ಪರ ವಕೀಲರು ವಿರೋಧಿಸಿದ್ದರು.ಈ ಟಿಡಿಆರ್ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.
ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆ ಅಗಲೀಕರಣಕ್ಕಾಗಿ ಒಟ್ಟು 15.36 ಎಕರೆ ಜಮೀನು ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಎಕರೆಗೆ 200 ಕೋಟಿ ರೂಪಾಯಿಯಂತೆ 3400 ಕೋಟಿ ಟಿಡಿಆರ್ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ಟಿಡಿಆರ್ ನೀಡಲು ಒಪ್ಪದ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿತ್ತು. ಹೀಗಾಗಿ ಸುಗ್ರೀವಾಜ್ಞೆ ಮತ್ತು ಪರಿಹಾರ ನೀಡದ್ದಕ್ಕೆ ರಾಜಮನೆತನ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
Key words: Bangalore Palace, land dispute, Supreme Court, government, TDR
The post ಬೆಂಗಳೂರು ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ TDR ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.