ಬೆಂಗಳೂರು, ಮೇ,9,2025 (www.justkannada.in): ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಪಡೆ ಸಿಐಎಸ್‌ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಶಸ್ತ್ರಸಜ್ಜಿತವಾಗಿ ಭದ್ರತಾ ಪಡೆಯಿದ ರೌಂಡ್ಸ್ ಹಾಕಲಾಗುತ್ತಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಏರ್ ಪೋರ್ಟ್ ನಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಏರ್ಪೋರ್ಟ್ಗೆ ಬರುವ ವಾಹನಗಳು, ಪ್ರಯಾಣಿಕರ ಮೇಲೆ ಹದ್ದಿನಕಣ್ಣಿಡಲಾಗಿದೆ.
ಪಾಕ್ ಗಡಿ ಭಾಗದ ಏರ್ಪೋರ್ಟ್ ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.
Key words: High alert, Bangalore, Kempegowda Airport
The post ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಭದ್ರತಾ ಪಡೆಯಿಂದ ರೌಂಡ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.