ಬೆಂಗಳೂರು, ಮಾರ್ಚ್ 23,2025 (www.justkannada.in): ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು ಬಿರು ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಈ ಮಧ್ಯೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ವಿಜಯನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಚಿಂಚೋಳಿ, ಬೆಂಗಳೂರು, ಸೇಡಂ, ಕಮಲಾಪುರದಲ್ಲಿ ಶನಿವಾರ ಮಳೆಯಾಗಿತ್ತು. ಹಾಗೆಯೇ ಹಾವೇರಿ, ಗದಗ, ಬೀದರ್, ಉಡುಪಿ, ದಕ್ಷಿಣ ಕನ್ನಡಲ್ಲಿ ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲೂ ಇಂದು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Key words: Rain, many districts, state
The post ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.