ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇದೀಗ ಕಣದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಬಂಡಾಯ ಅಖಾಡದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.
ಸಾದಿಕ್ ಪೈಲ್ವಾನ್ ಜೊತೆ ಸಂಧಾನಕ್ಕೆ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಇದೀಗ ಸಂಧಾನ ಯಶಸ್ವಿಯಾಗಿದ್ದು ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ನಲ್ಲಿನ ಬಂಡಾಯ ಶಮನವಾದಂತಾಗಿದೆ.
Key words: Davangere South, By-Election, Congress, Rebel, Sadiq Pailwan
The post ಬೈಎಲೆಕ್ಷನ್: ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




