ಮೈಸೂರು,ಏಪ್ರಿಲ್,21,2025 (www.justkannada.in): ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿ ಡಿಕ್ಕಿಯಾಗಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಭವಾನಿ (35) ಮೃತಪಟ್ಟವರು. ಪತಿ ಮಹೇಶ್ ಗೆ ಗಂಭೀರ ಗಾಯಗಳಾಗಿದ್ದುಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಗೆ ಲಾರಿ ಡಿಕ್ಕಿಯಾಗಿದ್ದು ಕೆಳಗೆ ಬಿದ್ದ ದಂಪತಿಗಳ ಮೇಲೆ ಲಾರಿ ಚಕ್ರ ಹರಿದಿದೆ. ಈ ವೇಳೆ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ಸಾವು
ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದ (34) ಮೃತ ವ್ಯಕ್ತಿ. ಅತಿ ವೇಗವಾಗಿ ಬಂದು ಗೋವಿಂದಗೆ ಕಾರು ಡಿಕ್ಕಿ ಹೊಡೆದಿದ್ದು, ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Lorry, collides, bike, wife, death, Mysore
The post ಬೈಕ್ ಗೆ ಲಾರಿ ಡಿಕ್ಕಿ: ಪತ್ನಿ ಸ್ಥಳದಲ್ಲೇ ಸಾವು: ಪತಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.