ಬೆಂಗಳೂರು,ಜೂನ್,13,2025 (www.justkannada.in): ಓಲಾ, ಊಬರ್ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎನ್‌ಐ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್(ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ಪೀಠವು ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂನ್ 24ಕ್ಕೆ ನಿಗದಿಪಡಿಸಿದೆ.
ಈ ಕುರಿತು ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿ ಎಜಿ ಶಶಿಕಿರಣ ಶೆಟ್ಟಿ, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಮ್ಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಕರ್ನಾಟಕದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗೆ ಪೆರ್ಮಿಟ್ ನೀಡಿಲ್ಲ 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ ಸುಪ್ರೀಂಕೋರ್ಟ್ ಕೂಡ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಹೇಳಿದರು.
ಅಲ್ಲದೆ, ಬೈಕ್ ಟ್ಯಾಕ್ಸಿಗಳ ಸೇವೆ ಕಾರ್ಯಚರಣೆ ಮುಂದುವರೆಸುವ ಸಂಬಂಧ ಮದ್ಯಂತರ ಪರಿಹಾರ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ಬೈಕ್ ಟ್ಯಾಕ್ಸಿ ಸೇವೆ ಮುಂದುವರೆಸಲು ನಿಯಮಗಳನ್ನು ರೂಪಿಸುವಂತಿದ್ದರೆ, ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂಬುದಾಗಿ ಹೇಳಬಹುದಾಗಿತ್ತು. ಆದರೆ, ಸರ್ಕಾರ ನಿಯಮಗಳನ್ನು ರೂಪಿಸುತ್ತಿಲ್ಲ ಎಂದು ತಿಳಿಸಿದೆ. ಹೀಗಾಗಿ, ಮಧ್ಯಂತರ ಪರಿಹಾರ ನೀಡಲಾಗದು ಎಂದು ಪೀಠ ಹೇಳಿದೆ.
Key words: High Court, refuses, grant, interim, permission , bike taxis
The post ಬೈಕ್ ಟ್ಯಾಕ್ಸಿ ಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.