1
May, 2026

A News 365Times Venture

1
Friday
May, 2026

A News 365Times Venture

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

Date:

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7  ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್  ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್  ಮತ್ತು ಉಪಲೋಕಾಯುಕ್ತರು ದುರಂತ ಸಂಭವಿಸಿದ ಬೌರಿಂಗ್ ಆಸ್ಪತ್ರೆಯ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್,  ಒಂದೇ ಮಳೆಗೆ ಇಷ್ಟೆಲ್ಲಾ ಅವಾಂತರಗಳಾಗುತ್ತಿದ್ದರೂ ಜಿಬಿಎ ಮತ್ತು ಜಲಮಂಡಳಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಮರದ ರೆಂಬೆಗಳನ್ನು ತೆರವುಗೊಳಿಸುವ ಪ್ರಾಥಮಿಕ ಕೆಲಸಗಳು ಏಕಾಗಿಲ್ಲ? ಗೋಡೆಗಳು ಶಿಥಿಲವಾಗಿದ್ದರೂ ವ್ಯಾಪಾರಕ್ಕೆ ಅನುಮತಿ ನೀಡಿದ್ದು ಯಾಕೆ? ವೈದ್ಯಕೀಯ ಶಿಕ್ಷಣ ಇಲಾಖೆಯು ಈ ತಡೆಗೋಡೆಯ ಬಗ್ಗೆ ಯಾವುದೇ ಗಮನಹರಿಸಿರಲಿಲ್ಲವೇ ಎಂದು ಪ್ರಶ್ನಿಸಿದರು.

ಪ್ರಕರಣವನ್ನ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ ಎನ್ನಲಾಗಿದೆ.

Key words: Bowring Hospital, Lokayukta Justice, B.S. Patil, visits

The post ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...