ಮಂಡ್ಯ,ಆಗಸ್ಟ್,11,2026 (www.justkannada.in): ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿದ ಬೆನ್ನಲ್ಲೆ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಇಂದು ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಆದೇಶಿಸಲಾಗಿದೆ. ಇದೀಗ ಸಿಡಬ್ಲ್ಯುಆರ್ ಸಿ ಆದೇಶದ ವಿರುದ್ದ ಮಂಡ್ಯ ಜಿಲ್ಲೆ ರೈತರ ಆಕ್ರೋಶ ಹೆಚ್ಚಾಗಿದೆ.
ರಸ್ತೆ ತಡೆ ನಡೆಸಿ ರೈತರು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಇದು ರಾಜ್ಯದ ಪಾಲಿಗೆ ಮರಣ ಶಾಸಕ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಸಿಎಂ ಡಿಕೆ ಶಿವಕುಮಾರ್ ಅವರೇ ತಮಿಳುನಾಡಿಗೆ ನೀರು ಹರಿಸಬೇಡಿ. ರಾಜ್ಯದ ರೈತರ ಹಿತ ಕಾಯಿರಿ ಎಂದು ಆಗ್ರಹಿಸಿದ್ದಾರೆ.
Key words: Order, release, water, Tamil Nadu, Protest, Mandya
The post ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ: ಮಂಡ್ಯದಲ್ಲಿ ರಸ್ತೆ ತಡೆದು ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




