23
January, 2026

A News 365Times Venture

23
Friday
January, 2026

A News 365Times Venture

ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಿರ್ಧಾರ- ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ

Date:

ನವದೆಹಲಿ,ಜೂನ್,9,2025 (www.justkannada.in):  ಜಾತಿ ಗಣತಿ ನಡೆದು 10 ವರ್ಷಗಳೇ ಕಳೆದಿದ್ದು ಈ ಸಂಬಂಧ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ಹೈಕಮಾಂಡ್ ಸೂಚಿಸಿದೆ. ಹೀಗಾಗಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ.  ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದೆ ಕಾಲ್ತುಳಿತ ಪ್ರಕರಣ ಮತ್ತು ಜಾತಿಗಣತಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಅದರಲ್ಲೂ ಮುಖ್ಯವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದ್ದಾರೆ. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.vtu

Key words: caste census, survey, again, CM Siddaramaiah

The post ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಿರ್ಧಾರ- ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...