ಬೆಂಗಳೂರು, ಜೂನ್, 20, 2025 (www.justkannada.in): ವಸತಿ ಯೋಜನೆ ಅಡಿ ಮನೆ ಹಂಚಿಕೆ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ, ಬಿಆರ್ ಪಾಟೀಲ್ ಜತೆ ಮಾತನಾಡಿರುವ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ , ಪ್ರಕರಣದ ಬಗ್ಗೆ ಸಚಿವ ಜಮೀರ್ ಗಮನಕ್ಕೆ ತಂದಿದ್ದೇನೆ. ಮುಖ್ಯ ಕಾರ್ಯದರ್ಶಿಗಳ ಗಮನಕ್ಕೂ ತರುತ್ತೇನೆ. ದೂರವಾಣಿಯಲ್ಲಿ ಮಾತನಾಡಿದ್ದನ್ನು ಸೋರಿಕೆ ಮಾಡಿದ್ದು ಸಂಪೂರ್ಣ ಅನೈತಿಕವಾದದ್ದು. ಜನಪ್ರತಿನಿಧಿ ಎಂಬ ಕಾರಣಕ್ಕೆ ಮಾತನಾಡಿದ್ದೇನೆ. ಅವರೇ ಕರೆ ಮಾಡಿ ಆಡಿಯೋ ರೆಕಾರ್ಡ್ ಮಾಡಿ ಲೀಕ್ ಮಾಡಿದ್ದಾರೆ ಎಂದಿದ್ದಾರೆ.
ಹಣ ತೆಗೆದುಕೊಂಡು ಮನೆ ಹಂಚಿಕೆ ಮಾಡಿದ್ದರೆ ತಿಳಿಸಿ, ಅಂಥವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ನಾನು ಆಡಿಯೋದಲ್ಲೇ ಸ್ಪಷ್ಟವಾಗಿ ಹೇಳಿದ್ದೇನೆ. ನನ್ನದು ಐಫೋನ್, ಇದರಲ್ಲಿ ರೆಕಾರ್ಡಿಂಗ್ ಮಾಡಿಕೊಳ್ಳಲು ಆಗುವುದಿಲ್ಲ. ಸಚಿವ ಜಮೀರ್ ಸಲಹೆ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಸರ್ಫರಾಜ್ ಖಾನ್ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಮತ್ತು ಸರ್ಫರಾಜ್ ಖಾನ್ ನಡುವೆ ನಡೆದಿದ್ದ ದೂರವಾಣಿ ಮಾತುಕತೆ ಆಡಿಯೋ ವೈರಲ್ ಆಗಿತ್ತು. ಈ ವೇಳೆ ಲಂಚದ ವಿಚಾರ ಪ್ರಸ್ತಾಪವಾಗಿತ್ತು. ಹಣ ನೀಡಿದವರಿಗಷ್ಟೇ ವಸತಿ ಯೋಜನೆ ಅಡಿ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಬಿಆರ್ ಪಾಟೀಲ್ ಆರೋಪಿಸಿದ್ದರು.
Key words: house allotment: Leaking, audio, Minister, Jameer, personal secretary
The post ಮನೆ ಹಂಚಿಕೆಗೆ ಲಂಚ ಆರೋಪ ಪ್ರಕರಣ: ಆಡಿಯೋ ಲೀಕ್ ಮಾಡಿದ್ದು ಅನೈತಿಕ – ಸಚಿವ ಜಮೀರ್ ಆಪ್ತ ಕಾರ್ಯದರ್ಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.