ಬೆಂಗಳೂರು,ಜೂನ್,19,2025 (www.justkannada.in): ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಅಕ್ಷಯ್ (29) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಅಕ್ಷಯ್ ತಲೆ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದು ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದನು. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ ತೆಗೆದುಕೊಂಡು ಬರುವುದಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು.
ಗಂಭೀರ ಗಾಯಗಳಾಗಿದ್ದ ಅಕ್ಷಯ್ ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಮಧ್ಯೆ ಅಕ್ಷಯ್ ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ತಲೆಚಿಪ್ಪು 17 ಚೂರುಗಳಾಗಿದೆ ಎಂದು ವೈದ್ಯರು ಹೇಳಿದ್ದರು. ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದರು. ಆದರೆ ಇದೀಗ ಯುವಕ ಅಕ್ಷಯ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
Key words: young, seriously injured, falling, tree, died, Bangalore
The post ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.