16
July, 2025

A News 365Times Venture

16
Wednesday
July, 2025

A News 365Times Venture

ಮಹಿಳಾ ದಿನಾಚರಣೆ: ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ಮಹಿಳೆಯರು

Date:

ಪಿರಿಯಾಪಟ್ಟಣ, ಮಾರ್ಚ್,17,2025 (www.justkannada.in):  ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದರು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಪವಿತ್ರ. ಎಸ್ ಅವರು  ಸಂತಸ ವ್ಯಕ್ತಪಡಿಸಿದರು.

ಪಿರಿಯಾಪಟ್ಟಣ ತಾಲ್ಲೂಕು ಭುವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಸೋಮವಾರ ಶಾಲಾ ಆವರಣದಲ್ಲಿ ಆಯೋಜಿಸಿದ್ದ, ಮಹಿಳಾ ಗ್ರಾಮಸಭೆ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣಪ್ರದೇಶದ ಮಹಿಳೆಯರು ಕುಟುಂಬದ ನಿರ್ವಹಣೆ ಹಾಗೂ ಕೃಷಿ ಕೆಲಸದಲ್ಲಿಯೇ ತಮ್ಮ ಬಹುಪಾಲು ಸಮಯ ಕಳೆಯುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ವಿವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ  ಹರೀಶ್ ಅವರು ಮಾತನಾಡಿ, ಎಲ್ಲಾ ಕ್ಷೇತ್ರದಲ್ಲಿಯು ಮಹಿಳೆಯರ ಸಾಧನೆ ವಿಶೇಷವಾಗಿದೆ. ಪುರುಷರನ್ನು ಮೀರಿಸುವಂತೆ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ ಎಂದರು.

ಮಹಿಳೆಯರು  ದೈಹಿಕ ಹಾಗೂ ಮಾನಸಿಕ ಒತ್ತಡದಿಂದ ಹೊರಬರಲು  ಈ ರೀತಿಯ ಕ್ರೀಡಾಕೂಟದಲ್ಲಿ ಹೆಚ್ಚು ಭಾಗವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸ್ವ-ಸಹಾಯ ಗುಂಪುಗಳನ್ನು ನಿರ್ಮಿಸಿಕೊಂಡಿದ್ದು, ಆ ಗುಂಪುಗಳು ಒಟ್ಟಾಗಿ ಸೇರಿ ಕ್ರೀಡಾಕೂಟಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಐಇಸಿ ಸಂಯೋಜಕ ರವಿಕುಮಾರ್ ನರೇಗಾ ಯೋಜನೆಯಡಿ ದೊರೆಯುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು ಹಾಗೂ ನರೇಗಾ ಸಹಾಯವಾಣಿ ಸಂಖ್ಯೆ 8277506000 ಬಗ್ಗೆ ಮಾಹಿತಿ ನೀಡಿದರು.

ಗುಂಡು ಎಸೆತ, ತಟ್ಟೆ ಎಸೆತ, ಲೆಮನ್ ಅಂಡ್ ಸ್ಪೂನ್, ಮ್ಯೂಸಿಕಲ್ ಚೇರ್, ರಂಗೋಲಿ, 100 ಮೀಟರ್ ಓಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾಯಕರ್ತೆಯರು, ಪ್ರಾಥಮಿಕ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಈ ಸಂದರ್ಭ ಉಪಾಧ್ಯಕ್ಷರಾದ ಮಮತಾ, ಸದಸ್ಯರಾದ ದೀಪು, ಜೆಜೆಎಂ ಐಇಸಿ ಸಂಯೋಜಕಿ ಭಾಗ್ಯ ಹಾಗೂ ಶಾಲಾ ಶಿಕ್ಷಕರು, ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Key words: Women’s Day,  Women, celebrate, sports events

The post ಮಹಿಳಾ ದಿನಾಚರಣೆ: ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ಮಹಿಳೆಯರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,16,2025 (www.justkannada.in):  ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ...

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ...

ಜು.19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ: ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜುಲೈ,16,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ...

ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ

ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ...