15
July, 2025

A News 365Times Venture

15
Tuesday
July, 2025

A News 365Times Venture

ಮಾನವೀಯ ಧರ್ಮ ಮತ್ತು ಸಿದ್ದಾಂತ ಕೊಟ್ಟಿದ್ದು ಬಸವಣ್ಣ- ಸಚಿವ ಎಂ.ಬಿ ಪಾಟೀಲ್

Date:

ಮಂಡ್ಯ,ಮೇ,31,2025 (www.justkannada.in): ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕ ಮತ್ತು ಬಸವ ಸಮಿತಿಯ ಘಟಕಗಳು ಶನಿವಾರ ಇಲ್ಲಿ ಏರ್ಪಡಿಸಿದ್ದ 892ನೇ  ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಳ್ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಲಿಂಗಾಯತರ ಜನಸಂಖ್ಯೆ ಶೇಕಡ 17ರಷ್ಟಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೂಡ 20 ಲಕ್ಷ ಲಿಂಗಾಯತರಿದ್ದಾರೆ. ನಮ್ಮ ಮಠಗಳು ಜಾತಿಯ ತಾರತಮ್ಯ ಮಾಡದೆ ಎಲ್ಲರಿಗೂ ಆಶ್ರಯ ನೀಡಿವೆ. ಈಗ ನಮ್ಮಲ್ಲೇ ಇರುವ ಉಪಪಂಗಡಗಳ ವ್ಯತ್ಯಾಸಗಳನ್ನು ಮರೆತು ಸಂಘಟನೆ ಮಾಡಬೇಕಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಸವಣ್ಣನವರು ಕಾಯಕಕ್ಕೆ  ಮಹತ್ವ ನೀಡಿ, ದಮನಿತ ಸಮುದಾಯಗಳನ್ನು ಲಿಂಗಾಯತ ಧರ್ಮಕ್ಕೆ ಸೇರಿಸಿಕೊಂಡರು. ನಾವು ಬಸವಣ್ಣನವರ ತತ್ವವನ್ನು ಸರಿಯಾಗಿ ಅನುಸರಿಸಿದ್ದರೆ ರಾಜ್ಯದ ಅರ್ಧ ಭಾಗದಲ್ಲಿ ಲಿಂಗಾಯತರೇ ಇರುತ್ತಿದ್ದರು ಎಂದು ಅವರು ಪ್ರತಿಪಾದಿಸಿದರು.

ಬಸವಣ್ಣ ಸಂಸ್ಕೃತದ ಪಾರಮ್ಯವನ್ನು ಮರೆತು, ವಚನಗಳ ಮೂಲಕ ದೇವರ ಜತೆ ಕನ್ನಡದಲ್ಲಿ ಮಾತನಾಡಲು ಆರಂಭಿಸಿದರು. ಈಗಲೂ ಬಸವ ಸಂದೇಶವು ಜಾಗತಿಕ ಮಟ್ಟದಲ್ಲಿ ಪ್ರಸಾರ ಆಗಬೇಕಾದ ಅಗತ್ಯವಿದೆ ಎಂದು ಎಂ.ಬಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.vtu

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿಗಳು, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಸಿ ಎಸ್ ಪುಟ್ಟರಾಜು, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ರುದ್ರೇಶ್, ಸಚ್ಚಿದಾನಂದ, ಇಂದಿರೇಶ್ ಮುಂತಾದವರು ಉಪಸ್ಥಿತರಿದ್ದರು.

Key words: Basavanna, humanistic religion, Minister, M.B. Patil

The post ಮಾನವೀಯ ಧರ್ಮ ಮತ್ತು ಸಿದ್ದಾಂತ ಕೊಟ್ಟಿದ್ದು ಬಸವಣ್ಣ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...