ಬೆಂಗಳೂರು ಗ್ರಾಮಾಂತರ, ಮೇ,7,2025 (www.justkannada.in): ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ವನ್ನು ಆಯೋಜಿಸಲು ಉದ್ದೇಶಿಸಲಾಗಿದೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಮೇಳದಲ್ಲಿ ಸುಮಾರು 50 ಕ್ಕೂ ಹೆಚ್ಚು ವಿವಿಧ ಮಾವು ತಳಿ, ಹಲಸು ತಳಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಹಮ್ಮಿಕೊಂಡು ರೈತರಿಂದ ನೇರವಾಗಿ ಖರೀದಿಸಲು ಅವಕಾಶ ಕಲ್ಪಿಸಲಾಗುವುದು. ರೈತರು ತಾವು ಬೆಳೆದ ಮಾವು ಮತ್ತು ಹಲಸು ಬೆಳೆಗಳನ್ನು ಮಾರಾಟ ಮಾಡಲು ಮೇ 08 ರಿಂದ 14 ರ ವರೆಗೆ ಹತ್ತಿರದ ತಾಲೂಕು ತೋಟಗಾರಿಕೆ ಕಛೇರಿಯಲ್ಲಿ ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9448999214, ದೇವನಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9480461234, ದೊಡ್ಡಬಳ್ಳಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 94821296648, ಹೊಸಕೋಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9880210892 ಹಾಗೂ ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9880461607 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Mango sales fair, Farmers, Register
The post ಮಾವು-ಹಲಸು ಮಾರಾಟ ಮೇಳ: ರೈತರು ನೋಂದಾಯಿಸಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.