11
March, 2026

A News 365Times Venture

11
Wednesday
March, 2026

A News 365Times Venture

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ

Date:

ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸ್ಟಾಲಿನ್ ಸೂಚನೆಯಂತೆ ತಮಿಳುನಾಡಿನ ಸಚಿವರು ಹಾಗೂ ಸಂಸದರೊಬ್ಬರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರ ಮರುವಿಂಗಡನೆ ಸಂಬಂಧಿಸಿದಂತೆ ಮಾರ್ಚ್ 22 ರಂದು ದಕ್ಷಿಣದ ರಾಜ್ಯಗಳ ಸಭೆ ನಡೆಯಲಿದೆ. ಚೆನೈನಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಭೆಗೆ  ಬರುವಂತೆ ತಮಿಳುನಾಡಿನ ಸಚಿವ ಮತ್ತು ಸಂಸದರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.

ಆದರೆ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ,  ಈ ಸಭೆಗೆ ಹಾಜರಾಗಲು ಸಾಧ್ಯವಿಲ್ಲ.  ಸಭೆಗೆ ತನ್ನ ಬದಲಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Key words:, CM, Siddaramaiah, letter , Tamil Nadu, CM Stalin

The post ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...