ಬೆಂಗಳೂರು,ಮಾರ್ಚ್,13,2025 (www.justkannada.in): ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್ ವಿಂಗಡನೆ ವಿರೋಧಿ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಸ್ಟಾಲಿನ್ ಸೂಚನೆಯಂತೆ ತಮಿಳುನಾಡಿನ ಸಚಿವರು ಹಾಗೂ ಸಂಸದರೊಬ್ಬರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರ ಮರುವಿಂಗಡನೆ ಸಂಬಂಧಿಸಿದಂತೆ ಮಾರ್ಚ್ 22 ರಂದು ದಕ್ಷಿಣದ ರಾಜ್ಯಗಳ ಸಭೆ ನಡೆಯಲಿದೆ. ಚೆನೈನಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಬರುವಂತೆ ತಮಿಳುನಾಡಿನ ಸಚಿವ ಮತ್ತು ಸಂಸದರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.
ಆದರೆ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಈ ಸಭೆಗೆ ಹಾಜರಾಗಲು ಸಾಧ್ಯವಿಲ್ಲ. ಸಭೆಗೆ ತನ್ನ ಬದಲಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
Key words:, CM, Siddaramaiah, letter , Tamil Nadu, CM Stalin
The post ಮಾ.22ಕ್ಕೆ ಕ್ಷೇತ್ರ ಪುನರ್ ವಿಂಗಡನೆ ವಿರೋಧಿ ಸಭೆ: ತಮಿಳುನಾಡು ಸಿಎಂ ಸ್ಟಾಲಿನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.