26
June, 2026

A News 365Times Venture

26
Friday
June, 2026

A News 365Times Venture

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

Date:

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಐವರು ಒಂದೇ ಕುಟುಂಬದ ಸದಸ್ಯರು ನೀರುಪಾಲಾಗಿ ಮೃತಪಟ್ಟ ಘಟನೆ ಇನ್ನೂ ಜನಮನದಿಂದ ಮಾಸುವ ಮುನ್ನವೇ, ಇದೀಗ ವೈದ್ಯರೊಬ್ಬರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ನಿವಾಸಿ ಹಾಗೂ ವೈದ್ಯರಾಗಿದ್ದ ಡಾ. ರಕ್ಷಿತ್ ಗೌಡ ಅವರ ಮೃತದೇಹ ಇಂದು ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚೆಗೆ ಮುತ್ತತ್ತಿ ಕಾವೇರಿ ನದಿಯಲ್ಲಿ ಸೆಲ್ಫಿ ಹಾಗೂ ಫೋಟೋ ತೆಗೆಯುವ ವೇಳೆ ಒಂದೇ ಕುಟುಂಬದ ಐವರು ನೀರುಪಾಲಾಗಿದ್ದ ದುರಂತ ಸಂಭವಿಸಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಂದು ಜೀವಹಾನಿ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

Key words: Mutatti, Kaveri river, doctor, Body, found

The post ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...