ಬೆಂಗಳೂರು,ಮೇ,24,2025 (www.justkannada.in): ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ 27ರವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
Key words: Heavy rains, state, three days, Red Alert
The post ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.