ಅಹಮದಾಬಾದ್ ,ಜೂನ್,12,2025 (www.justkannada.in): ಇಂದು ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಪೋರ್ಟ್ ಬಳಿ ಮೇಘನಿ ನಗರದಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ಇದೀಗ 20ಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹೌದು ಪತನಗೊಂಡ ಏರ್ ಇಂಡಿಯಾ ವಿಮಾನ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬಿದ್ದಿದೆ. ಈ ಘಟನೆಯಲ್ಲಿ 20 ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಮೇಲೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದೆ.
ಹಾಸ್ಟೆಲ್ ನಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಇನ್ನು ಬೆಂಕಿಯ ಕೆನ್ನಾಲಿಗೆ ಹಾಸ್ಟೆಲ್ ನ ಎರಡು ಕಟ್ಟಡ ಹೊತ್ತಿ ಉರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಊಟಕ್ಕೆಂದು ಬಂದಾಗ ಈ ದುರಂತ ಸಂಭವಿಸಿದೆ.
Key words: Plane, crashes, medical, college hostel, Ahmedabad
The post ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ಬಿದ್ದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು ಶಂಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.