16
December, 2025

A News 365Times Venture

16
Tuesday
December, 2025

A News 365Times Venture

ಮೇ ತಿಂಗಳಲ್ಲಿ KSDL ₹186 ಕೋಟಿ ವಹಿವಾಟು: 108 ವರ್ಷಗಳ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ

Date:

   ಬೆಂಗಳೂರು,ಜೂನ್,3,2025 (www.justkannada.in): ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ಡಿಎಲ್) ಮೇ ತಿಂಗಳಲ್ಲಿ ₹186 ಕೋಟಿ ಮೌಲ್ಯದ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸ್ಥಾಪಿಸಿದೆ. ಉದ್ಯಮದ 108 ವರ್ಷಗಳ ಇತಿಹಾಸದಲ್ಲೇ ಕೇವಲ ಒಂದು ತಿಂಗಳಲ್ಲಿ ಹೀಗೆ ಭಾರೀ ವಹಿವಾಟು ನಡೆಸಿರುವುದು ಇದೇ ಪ್ರಪ್ರಥಮ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಸಂಸ್ಥೆಗೆ ಮೇ ತಿಂಗಳಲ್ಲಿ 151.50 ಕೋಟಿ ರೂ. ವಹಿವಾಟಿನ ಗುರಿ ನಿಗದಿಪಡಿಸಲಾಗಿತ್ತು. ಆದರೆ, ಈಗ ಇದಕ್ಕಿಂತ ₹35 ಕೋಟಿ ಹೆಚ್ಚಿನ ವಹಿವಾಟು ನಡೆಸುವ ಮೂಲಕ ಶೇಕಡಾ 125ರಷ್ಟು ಸಾಧನೆ ಮತ್ತು ಶೇಕಡಾ 15ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಈ ವಹಿವಾಟಿನ ಪೈಕಿ ರಫ್ತಿನ ಮೂಲಕ 1.81 ಕೋಟಿ ರೂ. ಗಳಿಸಲಾಗಿದೆ. ರಫ್ತು ವಹಿವಾಟನ್ನು ವಾರ್ಷಿಕವಾಗಿ 150 ಕೋಟಿ ರೂ.ಗೆ ಕೊಂಡೊಯ್ಯುವ ಗುರಿ ಇದೆ ಎಂದಿದ್ದಾರೆ.

ಸಂಸ್ಥೆಯು ತಯಾರಿಸುವ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಎಲ್ಲಾ 45 ಬಗೆಯ ಉತ್ಪನ್ನಗಳು ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬಯಿ, ಕೋಲ್ಕತ್ತ, ನವದೆಹಲಿ ಶಾಖೆಗಳಲ್ಲಿ ಮತ್ತು ಬೆಂಗಳೂರಿನ ನೇರ ಮಾರುಕಟ್ಟೆ ವಿಭಾಗದ ಮೂಲಕ ನಿರೀಕ್ಷೆಗೂ ಮೀರಿ ಮಾರಾಟವಾಗಿವೆ. ಕೆಎಸ್ಡಿಎಲ್ ಉತ್ಪನ್ನಗಳಾದ ಸಾಬೂನು, ಶವರ್ ಜೆಲ್, ಅಗರಬತ್ತಿ ಮುಂತಾದವುಗಳಿಗೆ ವ್ಯಾಪಕ ಬೇಡಿಕೆ ಬರುತ್ತಿದೆ. ಸಂಸ್ಥೆಯಲ್ಲಿ ಗುಣಮಟ್ಟದ ಉತ್ಪಾದನೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆಗೆ ಕೈಗೊಂಡಿರುವ ಪ್ರಯತ್ನಗಳು ಫಲ ಕೊಡುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೇ ಅತಿ ಹೆಚ್ಚು ಅಂದದೆ ₹85 ಕೋಟಿ ವಹಿವಾಟು ನಡೆದಿದೆ. ಉಳಿದ ₹100 ಕೋಟಿ ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲಿ ಆಗಿದೆ ಎಂದು ಅವರು ಅಂಕಿ ಅಂಶ ನೀಡಿದ್ದಾರೆ.

ಈ ಹಿಂದೆ 2024ರ ಸೆಪ್ಟೆಂಬರ್ ತಿಂಗಳೊಂದರಲ್ಲೇ 178 ಕೋಟಿ ರೂ. ಮೌಲ್ಯದ ಉತ್ಪನ್ನಗಳನ್ನು ಮಾರಾಟ ಮಾಡಿದ್ದು ಇದುವರೆಗಿನ ದಾಖಲೆಯಾಗಿತ್ತು. ಈಗ ಇದನ್ನು ದಾಟಲಾಗಿದೆ. ಸಾಮಾನ್ಯವಾಗಿ ಕೆಎಸ್ಡಿಎಲ್ ಪ್ರತೀ ತಿಂಗಳೂ ಸರಾಸರಿ ₹135 ಕೋಟಿಗಳಿಂದ ₹140 ಕೋಟಿವರೆಗೂ ವಹಿವಾಟು ನಡೆಸುತ್ತದೆ. ಆದರೆ, ಮೇ ತಿಂಗಳಲ್ಲಿ ಇದಕ್ಕಿಂತ ₹41 ಕೋಟಿ ಹೆಚ್ಚು ವಹಿವಾಟು ದಾಖಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ಸಂಸ್ಥೆಯ ಕಾರ್ಯವಿಧಾನವನ್ನು ಹೆಚ್ಚು ದಕ್ಷಗೊಳಿಸಲಾಗಿದೆಯೇ ವಿನಾ ಯಾವ ಹೊಸ ಉಪಕರಣಗಳನ್ನೂ ಖರೀದಿಸಿಲ್ಲ. ಸದ್ಯದಲ್ಲೇ ಸಂಸ್ಥೆಯ ವತಿಯಿಂದ ಸುಗಂಧದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ  ವಿವರಿಸಿದ್ದಾರೆ.

Key words: KSDL, ₹186 crore, May, 108-year history

The post ಮೇ ತಿಂಗಳಲ್ಲಿ KSDL ₹186 ಕೋಟಿ ವಹಿವಾಟು: 108 ವರ್ಷಗಳ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...