ಹುಬ್ಬಳ್ಳಿ,ಏಪ್ರಿಲ್,24,2026 (www.justkannada.in): ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಲೀಂ ಅಹ್ಮದ್, ಮೇ 4ರ ಫಲಿತಾಂಶ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ 50 ರಷ್ಟು ಸಚಿವರನ್ನ ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಉಳಿದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇವೆ ಅದರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದ ಎಂದರು.
ನಾಯಕತ್ವ ಬದಲಾವಣೆ ಬಗ್ಗೆ ಮಾತಾಡದಂತೆ ಹೈಕಮಾಂಡ್ ಹೇಳಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ಸಲೀಂ ಅಹ್ಮದ್ ತಿಳಿಸಿದರು.
Key words: Cabinet expansion, happen, May 20th, Salim Ahmed
The post ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು –ಸಲೀಂ ಅಹ್ಮದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




