16
July, 2025

A News 365Times Venture

16
Wednesday
July, 2025

A News 365Times Venture

ಮೈಸೂರಿನಲ್ಲಿ ತಲೆ ಎತ್ತುತ್ತಿದೆ ಮತ್ತೊಂದು ಫ್ಲೈ ಓವರ್ ಬ್ರಿಡ್ಜ್

Date:

ಮೈಸೂರು,ಏಪ್ರಿಲ್,11,2025 (www.justkannada.in):  ಮೈಸೂರಿನಲ್ಲಿ ಹಿನಕಲ್ ಫ್ಲೈ ಓವರ್ ಬಳಿಕ ಇದೀಗ ಎರಡನೇ ಫ್ಲೈ ಓವರ್ ಬ್ರಿಡ್ಜ್ ತಲೆ ಎತ್ತುತ್ತಿದೆ.

ಹೌದು ಮೈಸೂರು ನಂಜನಗೂಡು ರಿಂಗ್ ರಸ್ತೆ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.  ಸುಮಾರು 10 ಕೋಟಿ ರೂಗಳ ವೆಚ್ಚದಲ್ಲಿ ಈ ಫ್ಲೈ ಓವರ್  ನಿರ್ಮಾಣ ಕಾರ್ಯ ನಡೆಸಲಾಗುತ್ತಿದ್ದು ಬೆಂಗಳೂರು ಮೂಲದ ಗುತ್ತಿಗೆದಾರನಿಗೆ ಎನ್ ಎಚ್ ಆರ್ ಎ ಟೆಂಡರ್ ಕೊಟ್ಟಿದೆ.

ಕೊಳ್ಳೆಗಾಲದಿಂದ ಕೇರಳಾದ ಕ್ಯಾಲಿಕಟ್ ಗೆ ಸಂಪರ್ಕವಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಈ  ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದು, ಅಪಘಾತ ವಲಯವಾದ ಆರ್ ಎಂಸಿ ಯಾರ್ಡ್ ಬಳಿ ವಾಹನ ದಟ್ಟನೆ ತಗ್ಗಿಸಲು ಈ ಹೊಸ ಯೋಜನೆ ಮಾಡಲಾಗುತ್ತಿದೆ.

ಅಪಘಾತ ಪ್ರಕರಣ ಹೆಚ್ಚಾದ ಬೆನ್ನಲ್ಲೇ ಮೇಲ್ಸೇತುವೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದು, ಫ್ಲೈಓವರ್ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ 18 ತಿಂಗಳ ಕಾಲಾವಕಾಶ ಕೊಟ್ಟಿದೆ. 2026 ನೇ ವರ್ಷಾಂತ್ಯಕ್ಕೆ ಈ ಮೇಲ್ಸೇತುವೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ.

Key words: Another, Fly Over Bridge, Mysore

The post ಮೈಸೂರಿನಲ್ಲಿ ತಲೆ ಎತ್ತುತ್ತಿದೆ ಮತ್ತೊಂದು ಫ್ಲೈ ಓವರ್ ಬ್ರಿಡ್ಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...