30
April, 2026

A News 365Times Venture

30
Thursday
April, 2026

A News 365Times Venture

ಮೈಸೂರಿನಲ್ಲಿ ತಾಪಮಾನ ಏರಿಕೆ: ಹೆಚ್ಚು ಬಿಸಿಲಿನ ವೇಳೆ ಅನಗತ್ಯ ಓಡಾಟ ಕಡಿಮೆ ಮಾಡಿ-ಡಿಎಚ್ ಒ ಡಾ.ಕುಮಾರಸ್ವಾಮಿ

Date:

ಮೈಸೂರು,ಮಾರ್ಚ್,23,2025 (www.justkannada.in):  ಮೈಸೂರಿನಲ್ಲಿ  ತಾಪಮಾನ ಏರಿಕೆ ಹಿನ್ನಲೆ. ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ. ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ತಿಳಿಸಿದರು.

ಈ ಕುರಿತು ಮಾತನಾಡಿದ ಡಿಎಚ್ ಒ ಕುಮಾರಸ್ವಾಮಿ,  ಹೆಚ್ಚು ಬಿಸಿಲಿನ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಟ ಕಡಿಮೆ ಮಾಡಬೇಕು. ದೇಹದ ನಿರ್ಜಲೀಕರಣ ಆಗದಂತೆ ಗಮನವಹಿಸಬೇಕು. ಉಷ್ಣಾಂಶ ಹೆಚ್ಚಾದಾಗ ಕೆಲವು ತೊಂದರೆಗಳು ಆಗುತ್ತವೆ. ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗಳಿಗೆ ಬೇಸಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ದೇಹ ನಿರ್ಜಲೀಕರಣ  ಮನೆಯಲ್ಲೇ ಓಆರ್ಎಸ್ ದ್ರಾವಣ ಹೇಗೆ  ತಯಾರಿಸಬೇಕು ಆಶಾ ಕಾರ್ಯಕರ್ತೆಯರು ಹೇಳಿಕೊಡುತ್ತಾರೆ. ಈ ನಿಟ್ಟಿನಲ್ಲಿ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದರು.

ಸಾಧ್ಯವಾದಷ್ಟು ನೀರು,ತಂಪು ಪಾನೀಯಗಳ ಸೇವಿಸಬೇಕು,ಮಾಂಸಹಾರ ಕಡಿಮೆ ಮಾಡಿ, ಸಸ್ಯಹಾರವನ್ನೇ ಹೆಚ್ಚು ಬಳಸಬೇಕು. ರೈತರು ಹೊಲ ಗದ್ದೆಗಳಲ್ಲಿ ದುಡಿಯುವವರು ಮುಂಜಾನೆ ಹೋಗಿ 10.30,11 ಗಂಟೆ ಸಮಯಕ್ಕೆ  ಮನೆಗೆ ಬಂದು ವಿರಮಿಸಬೇಕು. ಬಿಸಿಲ ತಾಪದಲ್ಲಿ ಕೆಲಸ ಮಾಡುವುದನ್ನು ಆದಷ್ಟು ಕಡಿಮೆ ಮಾಡಬೇಕು. ಬೇಸಿಗೆ ನಿರ್ವಹಣೆಗೆ ನಾವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ ಕೈಪಿಡಿಗಳು,ಪೋಸ್ಟರ್ ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ. ಜಿಲ್ಲಾ ಮಟ್ಟದಲ್ಲೂ ವೈದ್ಯರಿಗೆ ಬೇಸಿಗೆ ಸಂಧರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರತ್ಯೇಕ ಸಭೆ ಮಾಡಿ ಸೂಚನೆ ಕೊಡಲಾಗಿದೆ ಎಂದರು.

Key words: Temperatures rise , Mysore, DHO, Dr. Kumaraswamy

The post ಮೈಸೂರಿನಲ್ಲಿ ತಾಪಮಾನ ಏರಿಕೆ: ಹೆಚ್ಚು ಬಿಸಿಲಿನ ವೇಳೆ ಅನಗತ್ಯ ಓಡಾಟ ಕಡಿಮೆ ಮಾಡಿ-ಡಿಎಚ್ ಒ ಡಾ.ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...