ಮೈಸೂರು,ಮೇ,30,2025 (www.justkannada.in): ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು.
ತೊಣಚಿಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಚಾಲನೆ ನೀಡಿದರು.
ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಟಾಂಗಾ ಗಾಡಿ (ಸಾರೋಟ) ಯಲ್ಲಿ ಕೂರಿಸಿಕೊಂಡು ಮೆರವಣಿಯ ಮೂಲಕ ಶಾಲೆಗೆ ಕರೆತಂದು ಸಿಹಿಯನ್ನು ವಿತರಿಸಲಾಯಿತು. ಇದೇ ವೇಳೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನೂ ವಿತರಣೆ ಮಾಡಿದರು. ಹಾಗೆಯೇ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ನೋಟ್ ಪುಸ್ತಕಗಳನ್ನು ನೀಡಿದರು.
ಈ ವೇಳೆ ಮಾತನಾಡಿದ ಮಾಜಿ ಕಾರ್ಪೊರೇಟರ್ ಗೋಪಿ, ಶಾಲೆಯ ನೂರು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನ ಉಚಿತವಾಗಿ ಹೋಲಿಸಿ ಕೊಡುತ್ತೇನೆಂದು ತಿಳಿಸಿದರು. ಮಾಜಿ ಕಾರ್ಪೊರೇಟರ್ ಜಗದೀಶ್ ಅವರು, ತೊಣಚಿಕೊಪ್ಪಲಿನ ಮುಖಂಡಜವರಪ್ಪ, ಬಿ ಆರ್ ಸಿ ಶ್ರೀಕಂಠ ಸ್ವಾಮಿ, ಮುಖ್ಯ ಶಿಕ್ಷಕಿ ಚಂದ್ರಮ್ಮ ಸಹ ಶಿಕ್ಷಕರು ಸಿಆರ್ ಪಿ ವಸಂತರಾಜು ಶಿಕ್ಷಣ ಸಂಯೋಜಕ ರಾಜೇಶ್ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
Key words: Government school, Mysore, Students,
The post ಮೈಸೂರಿನಲ್ಲಿ ಶಾಲಾ ಪ್ರಾರಂಭೋತ್ಸವ: ಟಾಂಗಾ ಗಾಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ, ಸಿಹಿ ವಿತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.