11
March, 2026

A News 365Times Venture

11
Wednesday
March, 2026

A News 365Times Venture

ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆ ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಿ- ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

Date:

ನವದೆಹಲಿ,ಏಪ್ರಿಲ್,4,2025 (www.justkannada.in): ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆಯ ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಳ್ಳಬೇಕು ಎಂದು  ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ  ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ  ನಾಗರಿಕ ವಿಮಾನ ಯಾನ  ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ  ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ  ಬಿ (2) (v)  ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು  ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು  ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ಮನವಿ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾಗೆಯೇ ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ  ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆಪಿಟಿಸಿಎಲ್  ಕೂಡ ಹೈ-ಟೆನ್ಷನ್ ಲೈನ್ ಗಳ   ಮತ್ತು  ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ   ಮಾರ್ಗ ಬದಲಾವಣೆಗೆ  31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ,  ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್  ವೇ  ವಿಸ್ತರಣೆಗೆ 240 ಎಕರೆ  ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ  ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: Mysore Airport, Run Way, Extension, CM Siddaramaiah, Union Aviation Minister

The post ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆ ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಿ- ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...