ಮೈಸೂರು, ಜೂನ್,25, 2025 (www.justkannada.in): ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ)ದ ಆದೇಶದಂತೆ ಚಾಮಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದ ವ್ಯಾಪ್ತಿಯಲ್ಲಿ 2025ರ ಜುಲೈ 1ರಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ (HT ಹೊರತುಪಡಿಸಿ) ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸೆಸ್ಕ್ ನಿಗದಿಪಡಿಸಿರುವ ದರದಲ್ಲಿ ರೀಟೇಲ್ ಔಟ್ ಲೆಟ್‌ಗಳಲ್ಲಿ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕಿದೆ ಎಂದು ಸೆಸ್ಕ್‌ನ ಐಟಿ ಮತ್ತು ಎಂಐಎಸ್ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.27ರಂದು ಗ್ರಾಹಕರ ಸಭೆ:
ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿರುವ ಕುರಿತು ಗ್ರಾಹಕರಿಗೆ ಅರಿವು ಮೂಡಿಸಲು ಜೂನ್ 27ರಂದು ಬೆಳಗ್ಗೆ 11.30ಕ್ಕೆ ನಿಗಮ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಆಸಕ್ತ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸ್ಮಾರ್ಟ್ ಮೀಟರ್ ಅನುಷ್ಠಾನದ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
Key words: Mysore, Smart meter, installation, mandatory, electricity connections
The post ಮೈಸೂರು: ಜು.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.