6
October, 2026

A News 365Times Venture

6
Tuesday
October, 2026

A News 365Times Venture

ಮೈಸೂರು ದಸರಾ ಹಿನ್ನೆಲೆ: ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಕ್ಕೆ ನಿರ್ಧಾರ

Date:

ಮೈಸೂರು,ಅಕ್ಟೋಬರ್,6,2026 (www.justkannada.in): ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ವಿವಿಧ ನಿಲ್ದಾಣಗಳ ನಡುವೆ  ಹೆಚ್ಚುವರಿಯಾಗಿ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಈ  ಕೆಳಗಿನ ಹೆಚ್ಚುವರಿ ಕಾಯ್ದಿರಿಸದ ವಿಶೇಷ ರೈಲುಗಳು ಸಂಚರಿಸಲಿವೆ.

  1. ಕೆಎಸ್ಆರ್ ಬೆಂಗಳೂರು–ಅಶೋಕಪುರಂ ನಡುವೆ 3 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06285/06286):

ರೈಲು ಸಂಖ್ಯೆ 06285 ಕೆಎಸ್ಆರ್ ಬೆಂಗಳೂರು–ಅಶೋಕಪುರಂ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 12:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 15:40 ಗಂಟೆಗೆ ಅಶೋಕಪುರಂ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06286 ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 16:10 ಗಂಟೆಗೆ ಅಶೋಕಪುರಂನಿಂದ ಹೊರಟು, ಅದೇ ದಿನ 20:00 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಎಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಹಾಗೂ ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲ್ಲಲಿವೆ.

  1. ಕೆಎಸ್ಆರ್ ಬೆಂಗಳೂರು–ಮೈಸೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06287/06288):

ರೈಲು ಸಂಖ್ಯೆ 06287 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 21:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ 00:20 ಗಂಟೆಗೆ ಮೈಸೂರು ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06288 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 00:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 03:30 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಪಾಂಡವಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ. ರೈಲು ಸಂಖ್ಯೆ 06285/06286 ಮತ್ತು 06287/06288 ಎಂಟು ಮೆಮು ಕಾರ್ ಬೋಗಿಗಳನ್ನು ಹೊಂದಿರಲಿವೆ.

  1. ಮೈಸೂರು–ಕೆಎಸ್ಆರ್ ಬೆಂಗಳೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06297/06298):

ರೈಲು ಸಂಖ್ಯೆ 06297 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 23:15 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 02:50 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06298 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 03:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 06:30 ಗಂಟೆಗೆ ಮೈಸೂರು ತಲುಪಲಿದೆ.

ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ, ಬ್ಯಾಡರಹಳ್ಳಿ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ನಿಲ್ಲಲಿವೆ.

  1. ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06293/06294):

ರೈಲು ಸಂಖ್ಯೆ 06293 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 21:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 23:20 ಗಂಟೆಗೆ ಚಾಮರಾಜನಗರ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06294 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 23:50 ಗಂಟೆಗೆ ಚಾಮರಾಜನಗರದಿಂದ ಹೊರಟು, ಮರುದಿನ 01:50 ಗಂಟೆಗೆ ಮೈಸೂರು ತಲುಪಲಿದೆ.

ಇಪ್ಪತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

  1. ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06289/06290):

ರೈಲು ಸಂಖ್ಯೆ 06289 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 00:10 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 02:00 ಗಂಟೆಗೆ ಚಾಮರಾಜನಗರ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06290 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 02:30 ಗಂಟೆಗೆ ಚಾಮರಾಜನಗರದಿಂದ ಹೊರಟು, ಅದೇ ದಿನ 04:15 ಗಂಟೆಗೆ ಮೈಸೂರು ತಲುಪಲಿದೆ.

ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕನ್ನಡ ಕೈಬರಹ ಉಳಿಸಲು ಹಿರಿಯ ಲೇಖಕ ರಘುಪತಿ ತಾಮ್ಹನ್ ಕರ್ ಸಲಹೆ

ಮೈಸೂರು,ಅಕ್ಟೋಬರ್,6,2026 (www.justkannada.in):  ಇಂದಿನ ಮಕ್ಕಳು ಕನ್ನಡವನ್ನು ಇಂಗ್ಲಿಷಿನಲ್ಲಿ ಬರೆಯುತ್ತಿದ್ದಾರೆ. ಇದಕ್ಕಾಗಿ ಕನ್ನಡ...

ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,6,2026 (www.justkannada.in): “ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ...

BJP-JDS ಹಾಲುಜೇನಿನಂತೆ: ‘ಕೈ’ ಈಗಾಗಲೇ ಚಾಪೆ ಸುತ್ತಲು ಆರಂಭಿಸಿದೆ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಬಿಜೆಪಿ ಜೆಡಿಎಸ್  ಮೈತ್ರಿ ಬಗ್ಗೆ ಎಲ್ಲೂ ಅಪಸ್ವರ ಬಂದಿಲ್ಲ....

ಬಡವರ ಮತ ಕಿತ್ತು ಹಾಕುವುದು ನಾಚಿಕೆಗೇಡಿನ ಕೆಲಸ: ಬಿಜೆಪಿ ಕುತಂತ್ರದ ರಾಜಕಾರಣ ಮಾಡಬಾರದು- ಸಿಎಂ ಡಿಕೆಶಿ

ಬೆಂಗಳೂರು, ಅಕ್ಟೋಬರ್,06,2026 (www.justkannada.in):  ಕರ್ನಾಟಕ ಬಿಜೆಪಿಯವರು ಕುತಂತ್ರದ ರಾಜಕಾರಣ ಮಾಡಬಾರದು. ಪ್ರಜಾಪ್ರಭುತ್ವ...