15
June, 2026

A News 365Times Venture

15
Monday
June, 2026

A News 365Times Venture

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

Date:

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್  ನಿಂದ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿ 7 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ದಟ್ಟಗಳ್ಳಿ ನೇತಾಜಿ ವೃತ್ತದ ಬಳಿ ಇರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್‌ ನಲ್ಲಿ ಈ ಘಟನೆ ನಡೆದಿದೆ. ಸಾಹಿಲ್ ಮತ್ತು ಪ್ರಕಾಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸುಯೋಗ ಹಾಗೂ ಅಪೋಲೋ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.

ಹೋಟೆಲ್ ನಲ್ಲಿ 25 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಫೈರ್ ಇಂಜಿನ್ ತಂಡದಿಂದ 7 ಜನರ ರಕ್ಷಣೆ ಮಾಡಲಾಗಿದೆ.  ಅಗ್ನಿ ಅವಘಡದ ವೇಳೆ  ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಆತಂಕಗೊಂಡ ಕೆಲವರು ಮೇಲಂತಸ್ತಿನಿಂದ ಜಿಗಿದು ಪಾರಾಗಲು ಯತ್ನಿಸಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Mysore,  Fire, bar and restaurant, 2 dead, 7 seriously

The post ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...

ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,15,2026 (www.justkannada.in):  ಗ್ಯಾರಂಟಿ ಯೋಝನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ...

ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ...