ಚಾಮರಾಜನಗರ,ಏಪ್ರಿಲ್,24,2025 (www.justkannada.in): ಮೈಸೂರು ವಿಭಾಗದಲ್ಲಿ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. 3647.42 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ. ಸಭೆ ಆರಂಭದಲ್ಲಿ ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ 3647.42 ಕೋಟಿ ಮೌಲ್ಯದ ಕಾಮಗಾರಿಗೆ ಅಂಗೀಕಾರ ನೀಡಲಾಗಿದೆ ಎಂದರು.
PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ 1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ ರೂ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು. ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ250 ಬೆಡ್ ಗಳ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ ರೂ. ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕು ಭವನ ನಿರ್ಮಾಣ. ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ. ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ ನೀಡಲಾಗಿದೆ ಎಂದರು.
ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಜಾಗ
40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ. ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು. ಮೈಸೂರಿನ ಅಟ್ಟಾರ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ. ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ, ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ ಖರ್ಚಾಗಲಿದೆ. ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲಾಗಿದೆ. ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
Key words: Mala mahadeshwara, Cabinet Meeting, CM Siddaramaiah
The post ಮೈಸೂರು ವಿಭಾಗದಲ್ಲಿ 3647. 42 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.