ಮೈಸೂರು,ಜುಲೈ,29,2026 (www.justkannada.in): ಶ್ರೀದುರ್ಗಾ ಫೌಂಡೇಶನ್ ಹಾಗೂ ಪಿಆರ್ ಕೆ ಫೌಂಡೇಶನ್ ವತಿಯಿಂದ ಆಷಾಢ ಮಾಸದ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು.
ಇದೇ ಸಂಧರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮಾತನಾಡಿ ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ ಇಂತಹ ಸಂದರ್ಭದಲ್ಲಿ ಶಕ್ತಿ ದೇವತೆ ದರ್ಶನ ಪಡೆದರೆ ಒಳಿತಾಗುತ್ತದೆ. ಅದರಲ್ಲೂ ಜ್ಞಾನ ಶಕ್ತಿ, ಇಚ್ಛಾಶಕ್ತಿ, ಕ್ರಿಯಾಶಕ್ತಿ ಇರುವ ಚಾಮುಂಡಿತಾಯಿಗೆ ಆಷಾಢ ಮಾಸದಲ್ಲಿ ಪೂಜೆ ಸಲ್ಲಿಸಿದರೆ ಒಳ್ಳೆಯಾದಗುತ್ತದೆ ಎಂದರು.
ಪುರಾಣಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಷಾಡ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪ್ರಾರ್ಥನೆ ಪೂಜಾ ಕೈಂಕರ್ಯ ಸೇವೆ ಸಲ್ಲಿಸಲು ಮಹಿಳೆಯರು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಪ್ರತಿನಿತ್ಯ ಸೇವೆ ಸಲ್ಲಿಸುವ ಮಹಿಳಾ ಭದ್ರತಾ ಸ್ವಚ್ಛತಾ ಸಿಬ್ಬಂದಿಗಳನ್ನ ಗೌರವಿಸಿ ಬಾಗಿನ ಸಮರ್ಪಣೆ ನೀಡುತ್ತಿರುವುದು ಅರ್ಥಪೂರ್ಣವಾದ ಆಚರಣೆ. ಧಾರ್ಮಿಕ ಪರಂಪರೆ ಉಳಿಯಬೇಕಾದರೆ ಪರಿಸರ ಸಂರಕ್ಷಣೆಯೂ ಸಹ ಬಹಳ ಮುಖ್ಯವಾಗುತ್ತದೆ ಎಂದರು.
ಮಹಿಳೆಯರಲ್ಲಿ ಧರ್ಮ ಜಾಗೃತಿ ಮತ್ತು ಧಾರ್ಮಿಕ ಸಾಮರಸ್ಯದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಪ್ರತಿವರ್ಷದಂತೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸುತ್ತಾ ಬಂದಿರುವುದು ಅರ್ಥಪೂರ್ಣವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಸೋಮಣ್ಣ, ಪಿಆರ್ ಕೆ ಫೌಂಡೇಶನ್ ಅಧ್ಯಕ್ಷ ಅಯ್ಯಪ್ಪ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಯುವ ಮುಖಂಡರಾದ ಜಿ ರಾಘವೇಂದ್ರ, ಮಂಜುಳಾ ಸೋಮಣ್ಣ, ರೂಪ ಗೌಡ, ಪಂಚಾಯತ್ ಡೆವಲಪ್ಮೆಂಟ್ ಅಧಿಕಾರಿ ಶೋಭಾ ದಿನೇಶ್, ಶೃತಿ ವಿನೋದ್,ಹೇಮಾ, ರಮ್ಯಾ, ವಿಜಯಲಕ್ಷ್ಮಿ ಅಯ್ಯಂಗಾರ್, ಸುವರ್ಣ, ರಾಧಾ, ಹಾಗೂ ಇನ್ನಿತರರು ಹಾಜರಿದ್ದರು.
Key words: Mysore, Chamundi hills, Bagina, female workers
The post ಮೈಸೂರು: ಸ್ವಚ್ಛತಾ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಮರ್ಪಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




