ಬೆಂಗಳೂರು ಮೇ,21,2025 (www.justkannada.in): ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.
Key words: 3695 elephants, state. CM. Siddaramaiah
The post ರಾಜ್ಯದಲ್ಲಿವೆ 3695 ಆನೆಗಳು: ಮಾನವ ಆನೆ ಸಂಘರ್ಷ ತಡೆಗೆ ಅಕ್ಕ ಪಕ್ಕ ರಾಜ್ಯಗಳ ಸಹಕಾರ ಅಗತ್ಯ- ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.