ಬೆಂಗಳೂರು,ಮೇ,28,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಲವ್ ಜಿಹಾದ್ ಗಳು ನಡೆಯುತ್ತಿವೆ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿವೆ. ಕರಾವಳಿ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಈಗ ಅಲ್ಲಿ ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. 144 ಸೆಕ್ಷನ್ ಜಾರಿ ಮಾಡಿದ ತಕ್ಷಣ ಕಾನೂನು ಪಾಲನೆಯಾಗುತ್ತದೆ ಎಂದು ಸರ್ಕಾರ ತಿಳಿದುಕೊಂಡಿದೆ. ಅದನ್ನು ಬಿಟ್ಟು ಕಾನೂನನ್ನು ಸರಿಯಾಗಿ ಪರಿಪಾಲನೆ ಮಡಬೇಕು ಎಂಬುದು ಸರ್ಕಾರದಲ್ಲಿ ಮರೀಚಿಕೆಯಾಗಿದೆ ಎಂದು ಆರ್.ಅಶೋಕ್ ಹರಿಹಾಯ್ದರು.
Key words: Law and order, state,completely, failed,R. Ashok
The post ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.