11
July, 2025

A News 365Times Venture

11
Friday
July, 2025

A News 365Times Venture

ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಹೆಸರು ಮುದ್ರಣ ಕಡ್ಡಾಯ

Date:

ಬೆಂಗಳೂರು,ಮಾರ್ಚ್,1,2025 (www.justkannada.in): ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಕೆ. ಅವರು, ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಎಲ್ಲವೂ ಬೇರೆ ಭಾಷೆಯ ಜೊತೆಗೆ ಕನ್ನಡದಲ್ಲಿಯೂ ಇರಬೇಕು.

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Key words: Printing, Kannada name, mandatory, products, state

 

The post ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಹೆಸರು ಮುದ್ರಣ ಕಡ್ಡಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ “ಉಚಿತ ಶಿಕ್ಷಣ” ಗ್ಯಾರಂಟಿ.

ಮೈಸೂರು, ಜು.೧೦,೨೦೨೫:  ಇನ್ಮುಂದೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯದ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು,ಜುಲೈ,10,2025 (www.justkannada.in):  ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ...

ಆಸ್ತಿ ಕಬಳಿಕೆಗೆ ಸಂಚು: ಐವರ ವಿರುದ್ದ ಪ್ರಕರಣ ದಾಖಲು

ಮೈಸೂರು,ಜುಲೈ,10,2025 (www.justkannada.in): ಅಸಲಿ ವ್ಯಕ್ತಿ ಇದ್ದರೂ ಸಹ  ಆಸ್ತಿ ಕಬಳಿಸಲು ಸಂಚು...

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ...