ಮೈಸೂರು, ಜೂನ್, 25,2025 (www.justkannada.in): ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿನಿ ಕೆ.ಯುಕ್ತಿ ಚಿನ್ನ ಮತ್ತು ಬೆಳ್ಳಿ ಪದಕವನ್ನ ಗೆದ್ದಿದ್ದಾರೆ.
ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕ ಮತ್ತು 4X100 ರಿಲೆಯಲ್ಲಿ ಚಿನ್ನದ ಪದಕವನ್ನ ವಿದ್ಯಾರ್ಥಿನಿ ಯುಕ್ತಿ ಕೆ ಮುಡಿಗೇರಿಸಿಕೊಂಡಿದ್ದಾರೆ. ಮೈಸೂರಿನ ಹೆಬ್ಬಾಳ್ ನಿವಾಸಿಯಾಗಿರುವ ಕಿಶೋರ್ ಮತ್ತು ನಂದಿನಿ ದಂಪತಿ ಪುತ್ರಿಯಾಗಿರುವ ಕೆ. ಯುಕ್ತಿ ಮೈಸೂರಿನ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾರೆ. ಯುಕ್ತಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಅಥ್ಲಿಟ್ಸ್‌ಗಳು ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಯುಕ್ತಿ ಅವರು ಮೈಸೂರಿನ ಓವೆಲ್ ಅಥ್ಲೆಟಿಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಅಭ್ಯಾಸ ಮಾಡುತ್ತಿದ್ದು, ಈಗಾಗಲೇ ಹಲವು ಜಿಲ್ಲಾ ಮಟ್ಟದ ಸ್ಪರ್ಧೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪದಕಗಳನ್ನು ಗೆದ್ದಿದ್ದಾರೆ.
ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡಲು ತಯಾರಿ ನಡೆಸಿರುವ ಯುಕ್ತಿ ಅಲ್ಲಿಯೂ ಕೂಡ ಪದಕಗಳನ್ನು ಗಳಿಸುವ ಕನಸು ಕಟ್ಟಿಕೊಂಡಿದ್ದಾರೆ. ಇದಕ್ಕಾಗಿ ಯುಕ್ತಿ ಅವರು ನಿರಂತರ ಅಭ್ಯಾಸದಲ್ಲಿ ತೊಡಗಿದ್ದಾರೆ.
Key words: State level, athletics, Mysore, student , gold, silver, medal
The post ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರು ವಿದ್ಯಾರ್ಥಿನಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.