ಕಲಬುರುಗಿ,ಜೂನ್,24,2025 (www.justkannada.in): ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ. ಕೇಂದ್ರದ ಆರ್ಥಿಕ ನೀತಿಯಿಂದ ಹೀಗಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸರ್ಕಾರದ ಬಜೆಟ್ ಮುಚ್ಚುಮರೆ ಇರುವುದಿಲ್ಲ. ಲಾಭ ಖರ್ಚು ನಷ್ಟ ಎಲ್ಲವನ್ನೂ ಪಾರದರ್ಶಕವಾಗಿ ಇಡಲಾಗಿದೆ. ಆದರೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಗ್ಯಾರಂಟಿಗಾಗಿ 58 ಸಾವಿರ ಕೋಟಿ ರೂ ಖರ್ಚು ಮಾಡಲಾಗಿದೆ. ಒಂದಂತೂ ಸತ್ಯ ಕೇಂದ್ರದ ಆರ್ಥಿಕ ನೀತಿಯಿಂದ ಪರಿಸ್ಥಿತಿ ಹೀಗಾಗಿದೆ. ಮೇಕ್ ಇನ್ ಇಂಡಿಯಾ ಡಿಜಿಟಲ್ ಇಂಡಿಯಾ ಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.
ಗ್ಯಾರಂಟಿ ಸ್ಕೀಂಗಳಿಂದ ನಷ್ಟವಿಲ್ಲ. ಜನರಿಗೆ ಉಪಯೋಗವಾಗುತ್ತಿದೆ. ಜಿಎಸ್ ಟಿ ಸೇರಿ ರಾಜ್ಯಕ್ಕೆ ಬರಬೇಕಾದ ಅನುದಾನದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
Key words: state government, no financial distress, Minister, Priyank Kharge
The post ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.