ನವದೆಹಲಿ,ಮಾರ್ಚ್,13,2025 (www.justkannada.in): ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರುಗಳ ನೇಮಕಾತಿ ಸಮಿತಿ ಮಹಾವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ.ಎಸ್ ಭರತ್ ಕುಮಾರ್ ಅವರು, ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು 10.02.2025 ರಂದು ಹೊರಡಿಸಲಾದ ಅಧಿಸೂಚನೆ ಸಂಖ್ಯೆ. HCRB/CJR-1/2024 ಮತ್ತು ಅದರ ಮೇಲಿನ ಮುಂದಿನ ಕ್ರಮಗಳನ್ನು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ರಿಟ್ ಅರ್ಜಿ (ಸಿವಿಲ್) ಸಂಖ್ಯೆ 1022/1989 ರಲ್ಲಿನ IA ಸಂಖ್ಯೆ 72900/2021, 73015/2021, 40695/2021, 50269/2022, 201893/2022, 93974/2019 (ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತು ಇತರರು Vs, ಭಾರತ ಸರ್ಕಾರ ಮತ್ತು ಇತರರು) ನಲ್ಲಿ ತೀರ್ಪು ನೀಡುವವರೆಗೆ ತಡೆಹಿಡಿಯಲಾಗಿದೆ ಎಂದು ಈ ಮೂಲಕ ಅಧಿಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯವು ಅಗತ್ಯ ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿತ್ತು. ಒಟ್ಟು 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿ ಫೆಬ್ರವರಿ 10 ರಂದು ಅಧಿಸೂಚನೆ ಹೊರಡಿಸಿತ್ತು. ಮಾರ್ಚ್ 12ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು.
Key words: Supreme Court, stays, appointment, 158 civil judges, Karnataka high court
The post ರಾಜ್ಯ ಹೈಕೋರ್ಟ್ ನ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇಮಕಾತಿಗೆ ಸುಪ್ರೀಂ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.