24
August, 2026

A News 365Times Venture

24
Monday
August, 2026

A News 365Times Venture

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

Date:

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿದ್ದು ರಾಜ್ಯದಿಂದ ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು ಆಯ್ಕೆಯಾಗಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ದೇಶದ 48 ಶಿಕ್ಷಕರನ್ನು ಈ ಅತ್ಯುತ್ತಮ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆ  ಮಾಡಲಾಗಿದ್ದು, ಇದರಲ್ಲಿ ನಮ್ಮ ರಾಜ್ಯದ, ನಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಕೂಡ ಒಬ್ಬರು ಎಂಬುದನ್ನು ತಿಳಿಸಲು ಹರ್ಷಿಸುತ್ತೇನೆ.

ಶಿಕ್ಷಕರ ದಿನಾಚರಣೆಯಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೇಶದಲ್ಲಿಯೇ ಅತ್ಯುತ್ತಮವಾದ ಈ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ಯನ್ನು ಪ್ರದಾನ ಮಾಡಿ ಗೌರವಿಸಲಿದ್ದಾರೆ.

ಈ ಪ್ರಶಸ್ತಿಗೆ ಪಾತ್ರರಾದ, ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುತ್ತಿರುವ ರತ್ನಕುಮಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೀವು ನಮ್ಮ ಇಲಾಖೆ, ರಾಜ್ಯ ಮತ್ತು ನಮ್ಮ ಜಿಲ್ಲೆ ಹೆಮ್ಮೆಪಡುವಂತೆ ಮಾಡಿದ್ದೀರಿ. ನಿಮ್ಮ ಈ ಕೆಲಸ ರಾಜ್ಯದ ಶಿಕ್ಷಕ ಸಮುದಾಯಕ್ಕೆಲ್ಲಾ ಮಾದರಿ. ನಿಮ್ಮ ಪವಿತ್ರವಾದ ಈ ಶೈಕ್ಷಣಿಕ ಕಾಯಕ ಹೀಗೆಯೇ ಮುಂದುವರಿಯಲಿ. ನಿಮಗೆ ಮತ್ತೊಮ್ಮೆ ಅಭಿನಂದನೆಗಳು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: teacher, selected. National Teacher Award, Minister Madhu Bangarappa

The post ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ...