ಬೆಂಗಳೂರು,ಫೆಬ್ರವರಿ,25,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು.
ನಟ ದರ್ಶನ್ ಹಾಗೂ ಪವಿತ್ರಗೌಡಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
Key words: Renukaswamy, murder, case, Court, adjourns, hearing
The post ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಏ.8ಕ್ಕೆ ಮುಂದೂಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.