ಬಂಡಿಪೋರಾ, ಏಪ್ರಿಲ್ 25,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಉಗ್ರರ ವಿರುದ್ದ ಕಾರ್ಯಾಚರಣೆ ತೀವ್ರಗೊಳಿಸಿರುವ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನ ಹೊಡೆದುರುಳಿಸಿದೆ.
ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್ ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.
ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಅಲ್ತಾಫ್ನನ್ನು ಹತ್ಯೆ ಮಾಡಿದೆ.
ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದರು.
Key words: Indian Army, kills, top, Lashkar commander
The post ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಹತ್ಯೆಗೈದ ಭಾರತೀಯ ಸೇನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.