24
June, 2026

A News 365Times Venture

24
Wednesday
June, 2026

A News 365Times Venture

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

Date:

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ.ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು ಬಹುಮಾನವನ್ನು ಘೋಷಣೆ ಮಾಡಲಾಗಿದೆ.‌

ಇದಕ್ಕಾಗಿ ಒಂದು ಲಕ್ಷ ರೂಪಾಯಿಯನ್ನು ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕರು ಹಾಗೂ ಹಿರಿಯ ವಕೀಲ ಎಚ್ ಎನ್ ವೆಂಕಟೇಶ್ ಕಾಲೇಜು ಆಡಳಿತ ಮಂಡಳಿಗೆ ನೀಡಿದ್ದಾರೆ. 1 ಲಕ್ಷ ಠೇವಣಿ‌ ರೂಪದಲ್ಲಿ ಇಟ್ಟು ಅದರಿಂದ ಪ್ರತಿ ವರ್ಷವೂ ಬರುವ ಹಣವನ್ನು ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರಶಸ್ತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.

ಇಂದು ಶಾರದಾ ವಿಲಾಸ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ (IQAC) ವತಿಯಿಂದ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಎಚ್.ಎನ್ ವೆಂಕಟೇಶ್ ಅವರು ಘೋಷಣೆ ಮಾಡಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಕಾನೂನು ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್. ಇಂದ್ರೇಶ್, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಹಾಗೂ ‘ಲಾ ಗೈಡ್’ ಕನ್ನಡ ಕಾನೂನು ಮಾಸಪತ್ರಿಕೆಯ ಗೌರವ ಸಂಪಾದಕ ಹಿರಿಯ ವಕೀಲರಾದ ಹೆಚ್.ಎನ್. ವೆಂಕಟೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಚ್ ಎನ್ ವೆಂಕಟೇಶ್,  ಶಾರದ ವಿಲಾಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಬಗ್ಗೆ ವಿವರವಾಗಿ ತಿಳಿಸಿದರು. ಇಲ್ಲಿ ಓದಿದ ವಿದ್ಯಾರ್ಥಿಗಳು ಇಂದು ದೇಶದ ಎಲ್ಲಾ‌ ಭಾಗದಲ್ಲೂ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ಮೂಲಕ ದೇಶವನ್ನು ಮುನ್ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ನಮ್ಮ ಕಾಲೇಜು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾನು ಸಹಾ ಇದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ಈ ಪರಂಪರೆ ಇದೇ ರೀತಿ ಮುಂದುವರಿಯಲಿ ಅನ್ನೋದು ನನ್ನ ಆಶಯ. ಹೀಗಾಗಿ ಸಂವಿಧಾನ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಒಬ್ಬ ವಿದ್ಯಾರ್ಥಿಗೆ  ಲಾಗೈಡ್ ವತಿಯಿಂದ ನಗದು ದತ್ತಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಶಾರದ ವಿಲಾಸ ಕಾನೂನು ಕಾಲೇಜು ಮಂಡಳಿಗೆ ಒಂದು ಲಕ್ಷ ರೂಪಾಯಿ ಚೆಕ್‌ ನ್ನು ದೇಣಿಗೆ ನೀಡಿರುವುದಾಗಿ ಅವರು ತಿಳಿಸಿದರು. ಪ್ರತಿ ವರ್ಷವೂ ಪ್ರೊ ಸಿ.ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ. ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುವುದು ಎಂದು ಸಹ ಹೇಳಿದರು‌.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಯ ಹಿರಿಯ ಆಡಳಿತ ಮಂಡಳಿ ಸದಸ್ಯ ಎಸ್.ಎಲ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಸಂಸ್ಥೆಯ ಗೌರವ ಕಾರ್ಯದರ್ಶಿ ಆರ್. ದಿನೇಶ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು, ಕಾನೂನು ವಿದ್ಯಾರ್ಥಿಗಳು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Key words: Mysore, Law Guide, donates, Rs. 1 lakh, students, endowment award

The post ‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...