ಬೆಂಗಳೂರು,ಜೂನ್,19,2025 (www.justkannada.in): ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಿ ವಿಪಕ್ಷ ನಾಯಕರಿಂದ ಭಾರೀ ಟೀಕೆಗೆ ಗುರಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಹೀಗಾಗಿ ಮುಸ್ಲೀಮರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.10ರಿಂದ ಶೇ.15ಕ್ಕೆ ಹೆಚ್ಚಳವಾಗಲಿದೆ.
ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಇತ್ತೀಚೆಗೆ ಅಂಗೀಕರಿಸಲಾಗಿತ್ತು.
Key words: Increase, Muslim, reservation, housing scheme, State Cabinet
The post ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ : ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.