20
July, 2025

A News 365Times Venture

20
Sunday
July, 2025

A News 365Times Venture

ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ  44 ಕೋಟಿ ರೂ. ವೆಚ್ಚಕ್ಕೆ ಅಸ್ತು- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಫೆಬ್ರವರಿ,22,2025 (www.justkannada.in): ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, `2015-16ನೇ ಸಾಲಿನ ಬಜೆಟ್ ನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಅನುಷ್ಠಾನಕ್ಕೆ ಬರಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಡಲಾಗಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದಿದ್ದಾರೆ.

ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ 1.44 ಕೋಟಿ ರೂ. ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ, ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿದೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಗಿ ಅವರು ತಿಳಿಸಿದ್ದಾರೆ.

2 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ

ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ತಲಾ 22 ಕೋಟಿ ರೂ.ಗಳಂತೆ ಒಟ್ಟು 44 ಕೋಟಿ ರೂ. ಒದಗಿಸಲು ಕೂಡ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ಇಲ್ಲಿ ತಲಾ 250ರಂತೆ ಒಟ್ಟು 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗ ಇವು ಬಾಡಿಗೆ ಕಟ್ಟಡದಲ್ಲಿ ಇರುವುದರಿಂದ ಮೂಲಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿರುವ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕಾಗಿ ಒಟ್ಟು 1292.50 ಕೋಟಿ ರೂ. ಒದಗಿಸಲು ಸರಕಾರ ತೀರ್ಮಾನಿಸಿದೆ. ಇದರಲ್ಲಿ ಜಿಲ್ಲೆಯ ಈ ಎರಡು ಶಾಲೆಗಳೂ ಸೇರಿವೆ ಎಂದು ಎಂ.ಬಿ ಪಾಟೀಳ್ ಅವರು ಹೇಳಿದ್ದಾರೆ.

Key words: Minister, MB Patil, Vijayapur

The post ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ  44 ಕೋಟಿ ರೂ. ವೆಚ್ಚಕ್ಕೆ ಅಸ್ತು- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...