16
July, 2025

A News 365Times Venture

16
Wednesday
July, 2025

A News 365Times Venture

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ಕಲಿಕೆಯ ಹಂಬಲ “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

Date:

ಚಾಮರಾಜನಗರ, ಜೂನ್, 21,2025 (www.justkannada.in): ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಕೆ.ವಿ.ಪ್ರಭಾಕರ್, ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ ಯೋಚಿಸುವಂತಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಪೋಷಕರು ತಮ್ಮ ಅಗತ್ಯ ಮತ್ತು ಅನುಕೂಲಗಳ ಜೊತೆ ರಾಜಿ ಮಾಡಿಕೊಳ್ಳುತ್ತಾರೆ. ಪೋಷಕರ ಈ ತಪಸ್ಸಿಗೆ ಸಾರ್ಥಕತೆ ಬರುವುದು ಅವರ ಮಕ್ಕಳು ಸಾಧನೆ ಮಾಡಿದಾಗ, ಮಕ್ಕಳ  ಪ್ರತಿಭಾ ಪುರಸ್ಕಾರವನ್ನು ಕಣ್ಣಲ್ಲಿ ಕಾಣುವ ಪೋಷಕರಿಗೆ ಇದಕ್ಕಿಂತ ದೊಡ್ಡ ಸಮಾಧಾನ ಬೇರೆ ಇರುವುದಿಲ್ಲ. ಜೊತೆಗೆ ಮಕ್ಕಳು ಪರಿಶ್ರಮದಿಂದ ಕಲಿತರೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆ ಆಗುತ್ತದೆ. ಆರ್ಥಿಕ ಹೊರೆ ಕಡಿಮೆ ಇದ್ದಾಗ ಸಹಜವಾಗಿ ಪೋಷಕರ ಆರೋಗ್ಯ ಮತ್ತು ಮನೆಯ ಆರೋಗ್ಯವೂ ಚೆನ್ನಾಗಿರುತ್ತದೆ. ಹೀಗಾಗಿ SSLC ಮತ್ತು PUC ದಾಟಿದ ನಿಮ್ಮಗಳ ಮೇಲೆ ಪೋಷಕರನ್ನು ಖುಷಿಯಾಗಿಡುವ ಜವಾಬ್ದಾರಿ ಇರುತ್ತದೆ. ನಿಮ್ಮ ಪರಿಶ್ರಮ ಮತ್ತು ಜ್ಞಾನದಾಹ ಹಾಗೂ ಕಲಿಕೆಯ ಹಸಿವು ಹೆಚ್ಚಾಗಬೇಕು. ಈ ದಾಹ ಮತ್ತು ಹಸಿವು ನಿಮಗೆ ಜ್ವರದಂತೆ ಕಾಡಬೇಕು ಎಂದು ಕಿವಿಮಾತು ಹೇಳಿದರು.

ಇಲ್ಲಿ ಪ್ರತಿಭಾ ಸ್ವೀಕಾರಕ್ಕೆ ಬಂದಿರುವ ಮಕ್ಕಳ ಜೊತೆ ಎರಡು ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಒಂದು, ನಮ್ಮ ಎಲ್ಲಾ ಸಾಧನೆಗಳಿಗೂ ನಾವು ಬದುಕುತ್ತಿರುವ ಸಮಾಜದ ಕೊಡುಗೆ ಇರುತ್ತದೆ.  ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ ಎಂದು ಭಾವಿಸುತ್ತೇನೆ ಎಂದರು.

ಎರಡು, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು. ಈ ಬದಲಾವಣೆಗೆ ಪೂರಕವಾಗಿ ನೀವುಗಳು ವಿದ್ಯಾರ್ಥಿ ಜೀವನದಿಂದಲೇ ಯೋಚಿಸಬೇಕು. ನಾವು ಬದುಕುತ್ತಿರುವ ಸಮಾಜವೆಂಬ ಈ ಶರೀರ ಇನ್ನಷ್ಟು ಆನಂದವಾಗಿರಲು, ಇನ್ನಷ್ಟು ಆರೋಗ್ಯಕರವಾಗಿರಲು ನಾವೇನು ಮಾಡಬೇಕು ಎನ್ನುವ ದಿಕ್ಕಿನಲ್ಲಿ ಸದಾ ಚಿಂತನಾಶೀಲರಾಗಿರಬೇಕು. ಈ ಚಿಂತನಶೀಲತೆ ನಮ್ಮ ಜ್ಞಾನ ದಾಹ ಮತ್ತು ವಿವೇಕದ ಹಸಿವನ್ನು ಹೆಚ್ಚಿಸುತ್ತದೆ. ಈ ಎರಡು ಸಂಗತಿಗಳನ್ನು ಮಕ್ಕಳ ಜೊತೆ ಹಂಚಿಕೊಳ್ಳುವುಕ್ಕಾಗಿ ಮತ್ತು ಪೋಷಕರನ್ನು ವೃದ್ದಾಶ್ರಮಗಳಿಗೆ ಕಳುಹಿಸದಂತೆ ನಾವು ಜವಾಬ್ದಾರರಾಗಬೇಕು ಎನ್ನುವ ನನ್ನ ಕೋರಿಕೆಗಳನ್ನು ನಿಮ್ಮ ಮುಂದೆ ಇಡಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಕೆ.ವಿ ಪ್ರಭಾಕರ್ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ  ನಾನು ಅಭಿನಂದಿಸುತ್ತೇನೆ ಎಂದರು.

ಜುಲೈ 1ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.  ಹಾಗೆಯೇ 5 ಲಕ್ಷ ರೂಪಾಯಿವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ವಿ ಪ್ರಭಾಕರ್ ಭರವಸೆ ನೀಡಿದರು.vtu

Key words:  thirst, knowledge, desire, fever, students, K.V. Prabhakar

The post ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ಕಲಿಕೆಯ ಹಂಬಲ “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...