ಬೆಂಗಳೂರು ಗ್ರಾಮಾಂತರ, ಮೇ, 26,2025 (www.justkannada.in): 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಕೋರಿ ಅರ್ಹ ವಿದ್ಯಾರ್ಥಿಗಳು HMIS ಆನ್‌ಲೈನ್ ಪೋರ್ಟಲ್ ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ HMIS ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು Manual ಮುಖೇನ ಪ್ರವೇಶ ಪಡೆಯಲು ಹತ್ತಿರವಿರುವ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಭೇಟಿಯಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 30 ರ ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.2017, 2ನೇ ಮಹಡಿ, ಜಿಲ್ಲಾಡಳಿತ ಭವನ, ವೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ ಸಂಖ್ಯೆ:080-29787447/9480843020, ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು-080-27681784, ದೊಡ್ಡಬಳ್ಳಾಪುರ-080-27623681, ಹೊಸಕೋಟೆ-080-27931528, ನೆಲಮಂಗಲ-080-27723172 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Dormitory Admission, Online Application, Invitation
The post ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ: ಆನ್ ಲೈನ್ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.