ಮೈಸೂರು, ಫೆಬ್ರವರಿ,18, 2025 (www.justkannada.in): ವಿದ್ಯುತ್ ದರ ಪರಿಷ್ಕರಣೆ ಸಲುವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ) ಫೆ.19ರಂದು ಮೈಸೂರಿನಲ್ಲಿ ಸಾರ್ವಜನಿಕ ವಿಚಾರಣೆ ನಡೆಸಲಿದೆ.
ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಫೆ.19ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಾರ್ವಜನಿಕ ವಿಚಾರಣೆ ನಡೆಯಲಿದೆ. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದು ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.
Key words: Electricity. Rate Revision, Public, Mysore
The post ವಿದ್ಯುತ್ ದರ ಪರಿಷ್ಕರಣೆ: ಫೆ.19ರಂದು ಮೈಸೂರಿನಲ್ಲಿ ಸಾರ್ವಜನಿಕ ವಿಚಾರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.