ಅಹಮದಾಬಾದ್,ಜೂನ್,12,2025 (www.justkannada.in): ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಎಲ್ಲಾ 242 ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಯು ವರದಿ ಮಾಡಿದೆ.
ಅಹಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI 171 ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು. ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಮೇಘನಿನಗರದಲ್ಲಿ ಪತನಗೊಂಡಿದ್ದು, ದುರಂತದಲ್ಲಿ 242 ಮಂದಿಯೂ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿದ್ದ ಯಾರು ಬದುಕುಳಿದಿಲ್ಲ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ವಿಮಾನದಲ್ಲಿದ್ದರು ಎಂದು ಹೇಳಲಾಗುತ್ತಿದೆ.
Key words: Aircraft, Ahmedabad, All 242 passengers, Dead
The post ವಿಮಾನ ಪತನ ದುರಂತ: ಎಲ್ಲಾ 242 ಪ್ರಯಾಣಿಕರೂ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.