ಮೈಸೂರು,ಜುಲೈ,12,2025 (www.justkannada.in): ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಇದೊಂದು ದೊಡ್ಡ ಮೈಲಿಗಲ್ಲಾಗಿದ್ದು ಈ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ ಎಂದು ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನುಡಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಪುಷ್ಪಾ ಅಮರನಾಥ್, ಈವರೆಗೆ ನಮ್ಮ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರ ಜಿಲ್ಲಾ ತಾಲೂಕು ಮಟ್ಟದಲ್ಲಿ 5 ಶತಕ ಮಹಿಳಾ ಸಂಭ್ರಮ ಆಚರಿಸುತ್ತಿದೆ. ನಮ್ಮದು ಮೊದಲೇ ಬಡವರ ಪರ ಮಹಿಳೆಯರ ಪರವಾದ ಸರ್ಕಾರ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ. ನಮ್ಮ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ಸ್ವಾತಂತ್ರ್ಯ ಅನುಭವಿಸುವ ಅವಕಾಶವನ್ನ ನಮ್ಮ ಸರ್ಕಾರ ಮಾಡಿಕೊಟ್ಟಿದೆ.. ಇದೇ 14 ನೇ ತಾರೀಕು ಈ ಯಶಸ್ಸನ್ನ ಸಿಹಿ ಹಂಚಿ ಮಹಿಳೆಯರೊಂದಿಗೆ ಪ್ರಯಾಣಿಸಿ ಸಂಭ್ರಮಿಸಲು ತೀರ್ಮಾನಿಸಿದ್ದೇವೆ ಎಂದರು.
ಈವರೆಗೆ ಮೈಸೂರಲ್ಲಿ ಶಕ್ತಿ ಯೋಜನೆಗೆ 776.8 ಕೋಟಿ ಹಣ ವ್ಯವವಾಗಿದೆ. ರಾಜ್ಯದಲ್ಲಿ 12000,733.80 ಕೋಟಿ ಹಣ ವ್ಯಯವಾಗಿದೆ. ಇಷ್ಟು ದೊಡ್ಡ ಮೊತ್ತವನ್ನ ಇಡೀ ದೇಶದಲ್ಲೇ ಯಾವ ಸರ್ಕಾರವೂ ಕೊಟ್ಟಿಲ್ಲ. ಈ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 14 ರಂದು ದೃಷ್ಟಿ ಹೀನರಿಗಾಗಿ ವಿಶೇಷ ಉಪಕರಣ ಅಳವಡಿಸಿರುವ ನೂತನ ಸಾರಿಗೆ ಬಸ್ ಗಳನ್ನ ಸಚಿವ ರಾಮಲಿಂಗ ರೆಡ್ಡಿ ಅವರು ಮೈಸೂರಿನಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ನಗರ ಬಸ್ ನಿಲ್ದಾಣದಲ್ಲಿ ಮೊದಲ ಹಂತದಲ್ಲಿ 200 ಬಸ್ ಲೋಕಾರ್ಪಣೆ ಆಗಲಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ಡಾ. ಪುಷ್ಪಾ ಅಮರನಾಥ್ ತಿಳಿಸಿದರು.
Key words: Shakti Yojana, milestone, Mysore, July 4 , Dr. Pushpa Amarnath
The post ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು: ಜು.4 ರಂದು 200 ಬಸ್ ಲೋಕಾರ್ಪಣೆ – ಡಾ. ಪುಷ್ಪಾ ಅಮರನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.