ಬೆಂಗಳೂರು,ಏಪ್ರಿಲ್,16,2026 (www.justkannada.in): ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳೆಂದು ಈಗಾಗಲೇ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣ ಪ್ರಕಟವನ್ನು ನಾಳೆಗೆ ಕಾಯ್ದಿರಿಸಿದೆ.
ಇಂದು ಶಿಕ್ಷೆಯ ಪ್ರಮಾಣದ ಕುರಿತು ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ನಿನ್ನೆ ನಡೆದ ವಿಚಾರಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಜನರನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿತ್ತು. ನಾಳೆ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.
Key words: Sentence, tomorrow, MLA Vinay Kulkarni, 17 convicts, Court
The post ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




